Sunday 17 July 2016

ಉಗ್ರರ ಅಡಗುತಾಣ ನಿರ್ಮೂಲನೆಗೆ ಪಾಕ್​ಗೆ ಅಮೆರಿಕ ಸೂಚನೆ



ವಾಷಿಂಗ್ಟನ್: ಪಾಕಿಸ್ತಾನದಲ್ಲಿರುವ ಎಲ್ಲಾ ಉಗ್ರ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಉಗ್ರರ ಅಡಗುತಾಣಗಳನ್ನು ಶೋಧಿಸಿ ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಅಮೆರಿಕ ಪಾಕಿಸ್ತಾನಕ್ಕೆ ಸೂಚನೆ ನೀಡಿದೆ.ನೆರೆಹೊರೆಯ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಉಗ್ರ ಸಂಘಟನೆಗಳು ಸೇರಿದಂತೆ ಎಲ್ಲಾ ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಕ್ರಮ ತೆಗೆದುಕೊಳ್ಳಬೇಕು. ಉಗ್ರ ನಿಗ್ರಹಕ್ಕೆ ಸಂಬಂಧಿಸಿದಂತೆ ಅಮೆರಿಕ
ಪಾಕಿಸ್ತಾನಕ್ಕೆ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದೆ ಎಂದು ಅಮೆರಿಕದ ಸ್ಟೇಟ್ ಡಿಪಾರ್ಟ್​ಮೆಂಟ್​ನ ಉಪ ವಕ್ತಾರ ಮಾರ್ಕ್ ಟೋನರ್ ತಿಳಿಸಿದ್ದಾರೆ.

ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಶರೀಫ್ ಜುಲೈ 6 ರಂದು ಪಾಕ್ ಮಿಲಿಟರಿ ಕಮಾಂಡರ್​ಗಳು, ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳಿಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇದು ಸ್ವಾಗತಾರ್ಹ, ಪಾಕ್ ದೇಶದ ಭದ್ರತೆಗೆ ತೊಂದರೆ ಉಂಟು ಮಾಡುತ್ತಿರುವ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ದೇಶದ ಹಲವೆಡೆ ಉಗ್ರರ ನಿಯಂತ್ರಣದಲ್ಲಿದ್ದ ಪ್ರದೇಶದಲ ಮೇಲೆ ಪಾಕ್ ಸರ್ಕಾರ ತನ್ನ ಅಧಿಕಾರವನ್ನು ಮರುಸ್ಥಾಪಿಸಿದೆ. ಆದರೆ ಪಾಕ್ ಸವೆಸಬೇಕಾಗಿರುವ ಹಾದಿ ಇನ್ನೂ ಇದೆ ಎಂದು ಟೋನರ್ ತಿಳಿಸಿದ್ದಾರೆ.


No comments:

Post a Comment