Saturday, 9 July 2016

ಸಮಗ್ರ ತನಿಖೆ :ರಾಜನಾಥ್


ಪ್ರಚೋದನಾಕಾರಿ ದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಇಸ್ಲಾಂ ಧರ್ಮ ಪ್ರಚಾರಕ ಝಕೀರ್‌ ನಾಯ್ಕ್ ಅವರ ಅಗತ್ಯ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾಷಣದ ಸಿ.ಡಿ.ಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಭಯೋತ್ಪಾದನೆ ವಿಚಾರದಲ್ಲಿ ಸರ್ಕಾರ ಯಾವುದೇ ರಾಜಿಯಾಗುವುದಿಲ್ಲ ಎಂದು ಗೃಹಸಚಿವ ರಾಜನಾಥ್‌ ಸಿಂಗ್‌ ಸ್ಪಷ್ಟಪಡಿಸಿದರು.ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಝಕೀರ್‌ ನಾಯ್ಕ್ ಅವರ
ಭಾಷಣಗಳ ಸಿ.ಡಿ.ಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆಗೆ ಅಗತ್ಯವಿರುವ ಸೂಚನೆಗಳನ್ನು ನೀಡಿದ್ದೇವೆ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಯಲಿದೆ’ ಎಂದು ಹೇಳಿದರು. ‘ಸರ್ಕಾ ರವು ಭಯೋತ್ಪಾದನೆ ವಿಚಾರದಲ್ಲಿ ಯಾವ ಕಾರಣಕ್ಕೂ ರಾಜಿಯಾಗು ವುದಿಲ್ಲ. ಸಮರ್ಥನೀಯವಾದ ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತದೆ’ ಎಂದು ಸಿಂಗ್‌ ತಿಳಿಸಿದರು.

No comments:

Post a Comment