Thursday 7 July 2016

ಉತ್ತರಾಖಂಡ ವೆಚ್ಚ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸ್ತು

  ನವದೆಹಲಿ: ಪ್ರಸ್ತುತ ಕೇಂದ್ರ ಆಡಳಿತಕ್ಕೆ ಒಳಪಟ್ಟಿರುವ ಉತ್ತರಾಖಂಡದಲ್ಲಿ ಏಪ್ರಿಲ್ 1 ಬಳಿಕದ ವೆಚ್ಚಗಳಿಗೆ ಧನ ವಿನಿಯೋಗಕ್ಕೆ ಅವಕಾಶ ಮಾಡಿಕೊಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ರಾಷ್ಟ್ರಪತಿಯವರು ಸುಗ್ರೀವಾಜ್ಞೆಗೆ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1 ಬಳಿಕದ
ವೆಚ್ಚಗಳಿಗೆ ಧನ ವಿನಿಯೋಗ ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿತ್ತು.

No comments:

Post a Comment